ದಾವಣಗೆರೆ ನಗರದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ನಗರದ ಜಯದೇವ ವೃತ್ತದಿಂದ ಎಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರಸ್ತುತ ಧರ್ಮಸ್ಥಳ ಕ್ಷೇತ್ರದ ಮೇಲೆ ವಿನಾಕಾರಣ ಅಪಪ್ರಚಾರ ಮಾಡುವುದಲ್ಲದೆ ಧರ್ಮಕ್ಷೇತ್ರಗಳನ್ನ ಮಲಿನ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಇದೇ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದ ರಾಜಶೇಖರ್ ನಾಗಪ್ಪ ಸರ್ಕಾರದ ವಿರುದ್ಧ ಹರಿಹಾಯ್ದರು.