ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಶಹಪುರ ತಾಲೂಕ ಘಟಕದಿಂದ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಕನ್ಯೆಕೋಳೂರ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಸಾಯಂಕಾಲದವರೆಗೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಡವರಿಗೆ ಮನೆಗಳನ್ನು ನೀಡುವುದು ಸಾರ್ವಜನಿಕ ಶೌಚಾಲಯ ಶುದ್ಧ ಕುಡಿಯುವ ನೀರು, ಶಾಲೆಗಳಿಗೆ ತಡೆಗೋಡೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪಿಡಿಒ ಗೆ ಮನವಿ ಸಲ್ಲಿಸಿದರು. ತಾಲೂಕ ಅಧ್ಯಕ್ಷ ಭೀಮಣ್ಣ ತಪ್ಪೆದಾರ್, ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.