ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನೂತನ ಆದರ್ಶ ಸರಕಾರಿ ಪದವಿ ಪೂರ್ವ ಕಾಲೇಜ ಉದ್ಘಾಟನೆಯನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಸೆ.೦೮ ಮಧ್ಯಾಹ್ನ ೩ ಗಂಟೆಗೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಸ್‌ಆರ್ ಕೆ ದತ್ತಿ ಪುರಸ್ಕಾರ ಹಾಗೂ ಪ್ರಥಮ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶೀಕ್ಷಣಾಧಿಕಾರಿ ಜಾಸ್ಮೀನ ಕಿಲ್ಲೇದಾರ, ಹುನಗುಂದ ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಕೆಪಿಸಿಸಿ ಸದಸ್ಯ ಶಾಂತಕುಮಾರ ಸುರಪುರ ಸೇರಿದಂತೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.