ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತುಪ್ಪೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ನಿರಂತರವಾಗಿ ದಾಳಿ ಮಾಡುತ್ತಿದ್ದು. ಹತ್ತಾರು ಎಕರೆ ಭತ್ತದ ಗದ್ದೆಗಳನ್ನು ನಾಶ ಮಾಡಿದೆ. ಇದರಿಂದಾಗಿ ರೈತರ ಬದುಕು ಬೀದಿಗೆ ಬಂದು ನಿಂತಂತೆ ಆಗಿದೆ. ಕೂಡಲೇ ಕಾಡಾನೆಗಳನ್ನು ಓಡಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.