ತುಮಕೂರಿನ ಸೋಮೆಕಟ್ಟೆ ಮಠದ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳದವತಿಯಿಂದ ಪ್ರತಿಷ್ಠಾಪಿಸಿದ್ದ 8 ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವ ಅದ್ದೂರಿ ವಿಸರ್ಜನಾ ಮೆರವಣಿಗೆಯು ಶುಕ್ರವಾರ ಮಧ್ಯಾಹ್ನ 12.30 ರ ಸಮಯದಲ್ಲಿ ಆರಂಭಗೊಂಡಿತು. ಹಿರೇಮಠ ದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಖಾರದ ಮಠದ ವೀರಬಸವ ಸ್ವಾಮೀಜಿ ಚಿಕ್ಕತೊಟ್ಟಿಲಕೆರೆ ಆಟವಿ ಮಲ್ಲಿಕಾರ್ಜುನ ಸ್ವಾಮೀಜಿ, ಬಿಂದು ಶೇಖರ್ ಒಡೆಯರ್ ಸ್ವಾಮೀಜಿ, ರಾಮೇನಹಳ್ಳಿ ಮಠದ ಶಿವಪಂಚಾಕ್ಷರ ಸ್ವಾಮೀಜಿ ವಿಸರ್ಜನಾ ಮೆರವಣಿಗೆ ಚಾಲನೆ ನೀಡಿದರು. ಈ ವೇಳೆ ಶಾಸಕ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವೇದಮೂರ್ತಿ ಇದ್ದರು.