ವಿಜಯಪುರ ಜಿಲ್ಲಾ ಪೊಲೀಸರು ಇಬ್ಬರು ಅಂತರ ರಾಜ್ಯ ಕಳ್ಳರನ್ನು ಬಂಧಿಸಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಇನೋವಾ ಕಾರ್ ಆಟೋರಿಕ್ಷಾ ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.1.ಸಂಜೀವ ನೆಮೋಲಾ 2.ಸುಬ್ಬರಾವ.ಟಿ ಬಂಧಿತ ಆರೋಪಿಗಳಾಗಿದ್ದು. ಆರೋಪಿಗಳು ನೆರೆಯ ಆಂಧ್ರ ಮತ್ತು ಮಹಾರಾಷ್ಟ್ರ ಕರ್ನಾಟಕ ಸೇರಿದಂತೆ ನಾನಾ ಭಾಗಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಇನೋವಾ ಕಾರ್ ಆಟೋರಿಕ್ಷಾ ಹಾಗೂ ಬೆಲೆಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗೊಲ್ಲಗುಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.