ನಾಯಕನಹಟ್ಟಿ ಪಟ್ಟಣದ ಶ್ರೀಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಚೇರಿಗೆ ಮಂಗಳವಾರ ಶಾಸಕ ದೇವೇಂದ್ರಪ್ಪ ಭೇಟಿ ನೀಡಿ, ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಪಟ್ಟಣದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡುವ ಕುರಿತು ವಾಲ್ಮೀಕಿ ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಶ್ರೀಹಟ್ಟಿ ಮಲ್ಲಪ್ಪ ನಾಯಕ ಸಂಘದ ಪದಾಧಿಕಾರಿಗಳು ಶಾಸಕ ದೇವೇಂದ್ರಪ್ಪ ಅವರನ್ನು ಸನ್ಮಾನಿಸಿದರು. ಈ ವೇಳೆ ಹಟ್ಟಿ ಮಲ್ಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು, ನಿಕಟ ಪೂರ್ವ ತಹಶಿಲ್ದಾರ್ ರಘುಮೂರ್ತಿ ಸೇರಿದಂತೆ ಮುಂತಾದವರು ಇದ್ದರು.