ಪಟ್ಟಣದ 16 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಂ ಉಮಾವತಿ ನಾಗರಾಜ್ ರವರು ಮಾಜಿ ಸಚಿವ ವರ್ತೂರ್ ಪ್ರಕಾಶ್ ನೇತೃತ್ವದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂಧರ್ಭದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಮಾದ್ಯಮಗಳಿಗೆ ಪ್ರತಿಕ್ರಯಿಸಿ ಬಿಜಿಪಿಯವರ ಅಭಿವೃದ್ದಿ ಕಾರ್ಯಗಳಿಗೆ ಪ್ರತಿಫಲವನ್ನ ಜನಾಭಿಮಾನಿಗಳು ವೇಮಗಲ್ ಕುರುಗಲ್ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ತೋರಿಸಿದ್ದಾರೆ.ಆದ್ದರಿಂದ ನಮ್ಮ ಅಭಿವೃದ್ದಿ ಕಾರ್ಯಗಳಿಗೆ ಮೆಚ್ಚಿ ಪಟ್ಟಣದ 16 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಂ ಉಮಾವತಿ ನಾಗರಾಜ್ ರವರು ಸೇರ್ಪಡೆ ಯಾಗುತ್ತಿರುವುದು ಸ್ವಾಗತಾರ್ಹ ಎಂದರು.ಈ ಸಂದರ್ಭದಲ್ಲಿ ಮಧು ನಾಗರಾಜ್ ಇದ್ದರು