ಕರ್ನಾಟಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ಶೇ.೧ ರಷ್ಟು ಪ್ರತ್ಯೇಕ ಮಿಸಲಾತಿ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಅಲೆಮಾರಿ ಅರೆ ಅಲೆಮಾರಿ ಬುಡಕಟ್ಟು ಮಹಾಸಭಾದ ಸದಸ್ಯರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನ್ಯಾ. ನಾಗಮೋಹನ್ ದಾಸ ಅವರು ಸಲ್ಲಿಸಿರುವ ವರದಿ ಅನ್ವಯ ಒಳ ಮೀಸಲಾತಿ ಜಾರಿಗೆ ತರಬೇಕು.