ಚನ್ನಪಟ್ಟಣ ತಾಲ್ಲೂಕಿನ ಮುದುಗೆರೆ ಗ್ರಾಮದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಶಾಸಕ ಸಿ.ಪಿ.ಯೋಗೀಶ್ವರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಕಾವೇರಿ ನೀರಾವರಿ ನಿಗಮದ ಅನುದಾನದ ಅಡಿಯಲ್ಲಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಕಾರ್ಯಗಳಿಗೆ ಗ್ರಾಮಸ್ಥರ ಜೊತೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.