ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆಯ ಕಲುಷಿತ ನೀರು ಕುಡಿದು ಗ್ರಾಮದ ೧೫ ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಕೆರೆಯಲ್ಲಿರುವ ನೀರನ್ನು ನಲ್ಲಿಗಳ ಮೂಲಕ ಪೂರೈಸಲಾಗುತ್ತಿದ್ದರೂ ಕೆರೆ ನೀರಿನ ನಿರ್ವಹಣೆ ಹಾಗೂ ನೀರು ಶುದ್ಧೀಕರಣ ವ್ಯವಸ್ಥೆ ಇಲ್ಲ. ಮಹಿಳೆಯರು ಹಾಗೂ ಮಕ್ಕಳು ಸೇರಿ ೧೫ ಕ್ಕೂ ಹೆಚ್ಚು ಜನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.