ಚಿತ್ರದುರ್ಗ:-ಸೆಪ್ಟೆಂಬರ್ 13ರಂದು ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆಯಲ್ಲಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ ಬಂಡಾರು ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಚಿತ್ರದುರ್ಗ ನಗರದಲ್ಲಿ ಬುಧವಾರ ಸಂಜೆ 4ಗಂಟೆಗೆ ಸಭೆ ನಡೆಯಿತು.ಶೋಭಾಯಾತ್ರೆ ಸಮಯದಲ್ಲಿ ಎಲ್ಲಾ ನಾಗರೀಕರು ಸೌಹಾರ್ಧಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಇದ್ದರು.