ಐ ಎ ಎಸ್, ಐಪಿಎಸ್ ಆಗಬೇಕೆಂಬ ಈ ಭಾಗದ ಬಡ ಮಕ್ಕಳ ಕನಸು ನನಸಾಗಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನಿಸಬೇಕು ಎಂದು ಜಿ. ಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಸಲಹೆ ನೀಡಿದರು. ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 1:30ಕ್ಕೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿ, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು ಎಂದರು. ತಾ. ಪಂ ಇ. ಒ ದೀಪಿಕಾ ನಾಯ್ಕರ್ ಇದ್ದರು.