Download Now Banner

This browser does not support the video element.

ಮಂಗಳೂರು: ಪಾಂಡೇಶ್ವರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ‌ನೂತನ ಎಸ್ಪಿ, ಮಂಗಳೂರು ನಗರಕ್ಕೆ ನೂತನ ಪೊಲೀಸ್ ಕಮಿಷನರ್: ಪ್ರಕಟಣೆಯಲ್ಲಿ ರಾಜ್ಯ ಸರ್ಕಾರದ ಆದೇಶ

Mangaluru, Dakshina Kannada | May 29, 2025
ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾಗಿದ್ದ ಡಾ.ಅರುಣ್ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
Read More News
T & CPrivacy PolicyContact Us