ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಗೆರೆ ಹೋಬಳಿಯ ತರಬೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮಸ್ಥರ ಅಹವಾಲುಗಳನ್ನು ಜೆಡಿಎಸ್ ವಿರೋಧ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸಿ ಬಿ ಸುರೇಶ್ ಬಾಬು ಸ್ವೀಕರಿಸಿ ಹಲವು ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಿ ಸ್ಥಳದಲ್ಲಿಯೇ ಬಗೆಹರಿಸಿ ಗ್ರಾಮಕ್ಕೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು ರೈತರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿ ಹಲವು ಕಡೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್, ಇಓ ಸೇರಿದಂತೆ ಹಲವರು ಹಾಜರಿದ್ದರು