ಬೇಲೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರ ಆದೇಶದಂತೆ ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಗೆ ಹಾನಿಯುಂಟಾದ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಹೇಳಿದರು. ಬೇಲೂರು ತಾಲೂಕು ಅರೇಹಳ್ಳಿಯ ವಾಟೇಹಳ್ಳಿ ಗ್ರಾಮದ ಕಾಫಿ ಬೆಳೆಗಾರ ಹಾಗೂ ಎಚ್‌ಡಿಪಿಎ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿಯವರ ಕಾಫಿ ತೋಟಕ್ಕೆ ಭೇಟಿ ನೀಡಿ ಬೆಳೆಗಾರರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಕೃಷಿ ಸಚಿವರು ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಅಧಿಕಾರಿಗಳು ಕೈಕಟ್ಟಿ ಕುಳಿತಿರುವುದು ಶೋಚನೀಯ ಎಂದರು