ಪಾಲಿಕೆ ವತಿಯಿಂದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ತಯಾರಿಕೆ ಕಲಿಕಾ ಕಾರ್ಯಕ್ರಮ ಆಯೋಜಿಸುವ ಮೂಲಕ ಪರಿಸರ ರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲಾಯಿತು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ತಯಾರಿಕೆ ಕಲಿಕಾ ಕಾರ್ಯಕ್ರಮವನ್ನು ರಾಜರಾಜೇಶ್ವರಿನಗರ ವಲಯ ಆಯುಕ್ತರಾದ ಡಾ. ಸತೀಶ್ ಬಿ.ಸಿ.ರವರು ಹಾಗೂ ವಲಯ ಜಂಟಿ ಆಯುಕ್ತರಾದ ಶ್ರೀಮತಿ ಆರತಿ ಆನಂದ್ ರವರು ದೀಪ ಬೆಳಗಿಸುವ ಮೂಲಕ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಹೇರೋಹಳ್ಳಿಯ ಬಿಬಿಎಂಪಿ ಪ್ರೌಢಶಾಲೆ ಮತ್ತು ಪಿಯು ಕಾಲೇಜ್ ಹಾಗೂ ಲಗ್ಗೆರೆಯ ಬಿಬಿಎಂಪಿ ಪ್ರೌಢಶಾಲೆ