ಗೌರಿ ಗಣೇಶ ಹಬ್ಬವನ್ನು ಸಂಭ್ರಮ– ಸಡಗರದಿಂದ ಆಚರಿಸಲು ಬಳ್ಳಾರಿ ಜಿಲ್ಲೆಯ ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗಿರುವ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳು, ಅಗತ್ಯ ವಸ್ತುಗಳ ಖರೀದಿ ಭರಾಟೆ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಜೋರಾಗಿ ನಡೆಯಿತು. ನಗರದ ಎಪಿಎಂಸಿ ಮಾರುಕಟ್ಟೆ, ಬೆಂಗಳೂರು ರಸ್ತೆ , ಕನಕ ದುರ್ಗಮ್ಮ ದೇವಸ್ಥಾನ ಬಳಿ, ಹೂವಿನ ಮಾರುಕಟ್ಟೆ, ಕೌಲ್ ಬಜಾರ್, ಗಾಂಧಿನಗರ ಮಾರುಕಟ್ಟೆಯಲ್ಲಿ ಜನ ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ಮಗ್ನರಾಗಿದ್ದರು. ಹಣ್ಣು- ತರಕಾರಿ, ಹೂ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದರೂ ಗ್ರಾಹಕರು ಖರೀದಿಗೆ ಮುಗಿ ಬಿದ್ದಿದ್ದಾರೆ. ಕನಕಾಂಬರ, ಮಲ್ಲಿಗೆ, ಕಾಕಡ, ಸೇವಂತಿಗೆ ಮತ್ತು ಚೆಂಡು ಹೂ ದರ ತುಸು ಹೆಚ್ಚಾಗಿದೆ. ಮತ್ತೊಂದೆಡೆ, ಜನರು ಪರಿಸರ ಸ್ನೇಹಿ ಗಣಪತಿ ಖರೀದಿಗೆ