ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಳಿಯ ಕೃಷ್ಣಾ ನದಿಯ ಕಾಲುವೆಯಲ್ಲಿರುವ ಬೋರುಕಾ ಪವರ್ ಪ್ಲಾಂಟ್ ಹತ್ತಿರ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ರುಂಡವಿಲ್ಲದ ಶವ ಒಂದು ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಪುರುಷನ ಶವ ಎಂದು ಗೊತ್ತಾಗಿದೆ. ಮೃತ ದೇಹದ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ವ್ಯಕ್ತಿ ಯಾರು? ಈತನ ಇಂಥ ಒಂದು ಸಾವಿಗೆ ಕಾರಣ ಏನು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.