ಮೈಸೂರು ದಸರಾ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರಿಗೆ ನೀಡಬಾರದು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಮಂಗಳವಾರ ಮಧ್ಯಾನ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಹಸಿಲ್ದಾರ್ ಕಚೇರಿಯ ಮುಂದೆ ಸಮಿತಿಯ ಅನೇಕ ಜನ ಸದಸ್ಯರು ಭಾಗವಹಿಸಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಸರ್ಕಾರ ಅವಕಾಶ ನೀಡಬಾರದು, ಹಿಂದೂ ಸಮುದಾಯದ ಸಾಧಕರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ನಂತರ ಮುಖ್ಯಮಂತ್ರಿ ಗೆ ಬರೆದ ಮನವಿ ತಹಸಿಲ್ದಾರ್ ಭೀಮರಾಯ ರಾಮಸಮುದ್ರ ಮೂಲಕ ಸಲ್ಲಿಸಿದರು.