ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮೂಲನಂದಿಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆಯನ್ನು ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ವಿರಕ್ತ ಮಠದ ಸಿದ್ಧಲಿಂಗ ಶ್ರೀಗಳು ಚಾಲನೆ ನೀಡಿದರು. ಎರಡು ಟ್ಯಾಕ್ಟರ್ಗಳು ಹಿಂಬದಿಯಿಂದ ಜಗ್ಗುವ ಸ್ಪರ್ಧೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಅನೇಕ ಹಳ್ಳಿಯ ಸಾವಿರಾರು ಜನರು ಆಗಮಿಸಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆಯು ಅದ್ದೂರಿಯಾಗಿ ಜರುಗಿತು. ಟ್ಯಾಕ್ಟರ್ ಸ್ಪರ್ಧೆಯಲ್ಲಿ ಪ್ರಥಮ ದ್ವಿತೀಯ ತೃತೀಯ ಎಂದು ಮೂರು ಭಾಗಗಳಲ್ಲಿ ಬಹುಮಾನಗಳನ್ನು ವಿತರಣೆ ಮಾಡಿದರು.