ಧರ್ಮಸ್ಥಳದ ಕುರಿತು ಕಾಂಗ್ರೆಸ್ ಪಕ್ಷದಿಂದ ಅಪಪ್ರಚಾರ ನಡೆಸಲಾಗಿದೆ ಎಂದು ಜೆಡಿಎಸ್ ರಾಯಚೂರು ಜಿಲ್ಲಾ ಅಧ್ಯಕ್ಷ ವಿರುಪಾಕ್ಷಿ ಆರೋಪಿಸಿದ್ದಾರೆ. ಶುಕ್ರವಾರ ಮಧ್ಯಾನ ರಾಯಚೂರು ನಗರದ ಪತ್ರಿಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಅನ್ನೋದನ್ನ ಈಗಾಗಲೇ ಚೆನ್ನಯ್ಯ ಬಾಯಿಬಿಟ್ಟಿದ್ದಾನೆ, ಸುಳ್ಳು ಬುರುಡೆಯನ್ನು ಹಿಡಿದುಕೊಂಡು ಮಂಕು ಬೂದಿಯನ್ನು ಎರಚಿದ ಚೆನ್ನಯ್ಯನ ವಿರುದ್ಧ ಹಾಗೂ ಷಡ್ಯಂತ್ರ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇದೇ 31 ರಂದು ಜೆಡಿಎಸ್ ಪಕ್ಷದಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ನ ಮುಖಂಡರು ಉಪಸ್ಥಿತರಿದ್ದರು.