ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಶಾಲೆಯ ಆವರಣಕ್ಕೆ ಮಳೆ ನೀರು ನುಗ್ಗಿ ವಿದ್ಯಾರ್ಥಿಗಳು ಪರದಾಡುತ್ತಿರುವ ಘಟನೆ ಕಂಡುಬಂದಿದೆ. ಶನಿವಾರ ಬೆಳಗ್ಗೆ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಳೆ ನೀರು ನಿಂತಿದ್ದರಿಂದ ಕೊಚ್ಚೆ ನೀರಿನಲ್ಲಿಯೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೋಗಿ ಬರುವ ಸ್ಥಿತಿ ಎದುರಾಗಿದ್ದು, ಸೊಳ್ಳೆಗಳ ಕಾಟವು ಕೂಡ ವಿಪರೀತವಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆತಂಕ ವ್ಯಕ್ತಪಡಿಸಿ,ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಆವರಣದಲ್ಲಿನ ಮಳೆ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.