ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ ಸಕಲೇಶಪುರ: ತಾಲೂಕಿನ ಹಾನುಬಾಳು ಹೋಬಳಿ ದೇವಲದಕೆರೆಯ ಬೈರಳ್ಳಿ ಗ್ರಾಮದಲ್ಲಿ ಇಂದು ಅಂದಾಜು ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸುರಕ್ಷಿತವಾಗಿ ಸೆರೆ ಹಿಡಿದು, ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ನಿರ್ದೇಶನದ ಮೇರೆಗೆ ಕೆಂಪು ಹೊಳೆ ಮೀಸಲು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.ವಿಷಕಾರಿಯಾದ ಈ ಹಾವು ಮಳೆಗಾಲದಲ್ಲಿ ಹೆಚ್ಚಾಗಿ ಆಹಾರ ಅರಸಿಕೊಂಡು ನಾಡಿನ ಕಡೆ ಬರುತ್ತದೆ.ಈ ಗಾತ್ರದ ಕಾಳಿಂಗ ಸರ್ಪವು ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಾತ್ರ ಕಾಣಸಿಗುವ ಅಪರೂಪದ ಸರೀಸೃಪವಾಗಿದೆ. ಕಾಳಿಂಗ ಸರ್ಪದ ರಕ್ಷಣೆಯೊಂದಿಗೆ ಬೈರಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದ