ಚಾಮರಾಜನಗರ ತಾಲೂಕಿನ ಜಾಲಹಳ್ಳಿಹುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, 13.80 ಲಕ್ಷ ರೂ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದು, ಸುಸಜ್ಜಿತವಾಗಿ ಕಟ್ಟಡವನ್ನು ನಿರ್ಮಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಶಾಲೆಯಲ್ಲಿ 40 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಎಂದು ಸಲಹೆ ನೀಡಿದರು.