ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಮಧ್ಯಾನ ಜಿಲ್ಲಾ ಮತ್ತು ತಾಲೂಕ ಮಟ್ಟದ ಶಿಕ್ಷಕರ ದಿನವನ್ನು ಆಚರಿಸಲಾಗಿದೆ. ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತಿ ಶಾಲಾ ಮತ್ತು ಶಿಕ್ಷಣ ಇಲಾಖೆ ಇವರುಗಳ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನ ಶಿಕ್ಷಕರು ಭಾಗವಹಿಸಿದ್ದರು.