ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದು ವಿದ್ಯಾರ್ಥಿಗಳ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪಾಲಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಹಾಗೂ ಶಾಲಾ ಕಟ್ಟಡಕ್ಕೆ ಹೋಗಲು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಗೊಂಡು ಧರಣಿ ನಡೆಸಿದರು. ಶೆನಿವಾರ 8 ಗಂಟೆಗೆ ಈ ಬಗ್ಗೆ ಸ್ಥಳಿಯರು ಮಾಹಿತಿ ನೀಡಿದ್ದಾರೆ