ಧಾರವಾಡ ಶ್ರೀನಗರ ಸರ್ಕಲ್‌ನಲ್ಲಿರುವ ಕರ್ನಾಟಕ ಬ್ಯಾಂಕ್ ಶಟರ್ ಮುರಿದು ಕಳ್ಳತನಕ್ಕೆ ಯತ್ನಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬುಧವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಡ ರಾತ್ರಿ ಜನ ಓಡಾಟವಿದ್ದರೂ ಕಳ್ಳತನಕ್ಕೆ ಯತ್ನ ನಡೆದಿದೆ. ಬ್ಯಾಂಕ್ ಅಧಿಕಾರಿಗಳಿಗೆ ರಾತ್ರಿ ಬೀಟ್ ಪೊಲೀಸರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಲಿದೆ.