ಆ.27 ರಿಂದ ಸೆ. 13ರವರೆಗೆ ಉತ್ತರ ಕನ್ನಡ ಜಿಲ್ಲೆಯ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ನಗರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ 5ಕ್ಕೆ ಪ್ರಕಟಣೆ ನೀಡಿರುವ ಅವರು ಗಣೇಶ ಚತುರ್ಥಿಯ ಪ್ರಯುಕ್ತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾಧಿಗಳು, ಮಹಿಳೆಯರು ಆಗಮಿಸುವುದರಿಂದ ಕೆಲ ಯುವಕರು ಮದ್ಯಪಾನ ಮಾಡಿ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ತೊಂದರೆಯನ್ನುಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಯಿರುವುದರಿಂದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.