ಜಿಲ್ಲೆಯಲ್ಲಿ ತಾಯಿ ಮರಣ ಮತ್ತು ಶಿರು ಮರಣ ಪ್ರಮಾಣ ತಗ್ಗಿಸುವ ನಿಟ್ಡಿನಲ್ಲಿ ನಾವೆಲ್ಲರೂ ಬಹುಮುಖ್ಯ ಪಾತ್ರವಹಿಸಬೇಕಿದೆ. ಏಳು ವಾರಗಳ ಗರ್ಭಿಣಿ ಎಂದು ತಿಳಿದ ಮೇಲೆ ನಾವು ಅತಿ ಜಾಗರೂಕತೆಯಿಂದ ಅವರನ್ನು ನೋಡಿಕೊಳ್ಳಬೇಕಿದೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು. ನಗರದ ಬುದ್ಧ ನಗರ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ “ಗರ್ಭಿಣಿ ತಪಾಸಣೆ ಶಿಬಿರ” ಉದ್ಘಾಟಿಸಿ ಮಾತನಾಡಿದರು.ಆರೋಗ್ಯವಮಹಿಳೆಯಿಂದ ಆರೋಗ್ಯವಂತ ಮಗು ಜನಿಸಲು ಸಾಧ್ಯ ಎಂದರು.