ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ, ಹರ್ಕೂರು, 74 ಉಳ್ಳೂರು ಗ್ರಾಮಗಳಲ್ಲಿ ಪಿಎಂ ಜನಮನ ಯೋಜನೆಯಡಿ ಸುಮಾರು ರೂ. 4.35 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಶಂಕು ಸ್ಥಾಪನೆ ನೆರವೇರಿಸಿ, ನೂಜಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. ಈ ಸಮಯದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಶ್ರೀಮತಿ ಅನಿತಾ, ಮಾಜಿ ಅಧ್ಯಕ್ಷರಾದ ದೀಪಕ್ ಶೆಟ್ಟಿ ಅವರು ಸೇರಿದಂತೆ ಅನೇಕ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.