ಶಿಗ್ಗಾಂವಿ ತಾಲೂಕು ಬಾಡ ಗ್ರಾಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸ್ಪಂದನಾ ಸಭೆ ನಡೆಯಿತು. ಸಭೆಯನ್ನು ಉದ್ಘಾಟಿಸಿ ಶಾಸಕ ಯಾಸೀರ್ ಖಾನ್ ಪಠಾಣ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ವರದಾನ ಆಗಿವೆ. ಗ್ಯಾರಂಟಿ ದುಡ್ಡಿನಲ್ಲಿ ಮಹಿಳೆಯರು ಆಕಳು, ಟ್ರಜ್ಯೂರಿ, ಕಿರಾಣಿ ಅಂಗಡಿ ಇಟ್ಟುಕೊಂಡು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ ಎಂದರು.