ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರುಳೀಧರ್ ಎಂ. ಹೇಳಿದರು. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ಅಂತರಾಷ್ಟ್ರೀಯ ಕ್ರೀಡಾಪಟು ಆನಂದ್ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ನಿಯಮಿತ ಅಭ್ಯಾಸದಿಂದ ಮಾತ್ರ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಟಿ.ಆರ್., ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಪ್ರಭಾಕರ್ ಹಾಗೂ ಗಣ್ಯರು ಹಾಜರಿದ್ದರು. ಕ್ರೀಡಾಪಟುಗಳು ಕ್ರೀಡಾ ನಿಯಮಗಳಿಗೆ ಬದ್ಧರಾಗಿ, ತೀರ್ಪುಗಾರ