ಸತತ ಮಳೆಯ ಹಿನ್ನೆಲೆಯಲ್ಲಿ ಹೊನ್ನಾವರ ತಾಲೂಕಿನ ಗೇರಸೊಪ್ಪದ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಜಲಾಶಯದಿಂದ 13192 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಗುರುವಾರ ಮಧ್ಯಾಹ್ನ 2.50ಕ್ಕೆ ಮಾಹಿತಿ ನೀಡಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಶರಾವತಿ ಆಣೆಕಟ್ಟಿನ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದರಿಂದ ಜಲಾಶಯದ ಸುರಕ್ಷಣೆ ದೃಷ್ಟಿಯಿಂದ ನೀರು ಬಿಡುಗಡೆ ಮಾಡಲಾಗಿದೆ.