ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗೊಬ್ಬೂರ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಶೌಚಾಲಯ ಇಲ್ಲದ್ದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗಿದ್ದು ಶೌಚಾಲಯ ನಿರ್ಮಾಣಕ್ಕೆ ಜನ ಒತ್ತಾಯಿಸಿದ್ದಾರೆ. ಸೋಮವಾರ ಮಧ್ಯಾಹ್ನ ಅನೇಕ ಜನರು ಬೇಸರ ವ್ಯಕ್ತಪಡಿಸಿ, ಯು ಮುಂಚೆ ನಿರ್ಮಿಸಿರುವ ಶೌಚಾಲಯ ಹಾಳಾಗಿದ್ದು ದುರಸ್ತಿಗೊಳಿಸಲು ಕೂಡ ಮುಂದಾಗುತ್ತಿಲ್ಲ ಅಧಿಕಾರಿಗಳು ಕೂಡಲೇ ಹೊಸದಾಗಿ ಶೌಚಾಲಯ ನಿರ್ಮಿಸಬೇಕು ಇಲ್ಲವಾದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದ್ದಾರೆ.