ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಪ್ರಕರಣ ದಾಖಲು ಮಾಡಿಕೊಂಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಈ ಕುರಿತು ಮಾತನಾಡಿರುವ ಅವರು ಪೋಕ್ಸೊ ಕಾಯ್ದೆ ಪ್ರಕಾರ ಘಟನೆ ನಡೆದ 24 ಗಂಟೆ ಒಳಗೆ ಪ್ರಕರಣ ದಾಖಲಿಸಿಕೊಳ್ಳಬೇಕು ತ್ವರಿತವಾಗಿ ತನಿಖೆ ನಡೆಸಬೇಕು ಘಟನೆ ಕುರಿತು ಶಿವಮೊಗ್ಗ ಎಸ್ಪಿ ಜೊತೆ ಚರ್ಚೆ ಮಾಡಿದ್ದೇನೆ. ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪ್ರಕರಣ ದಾಖಲಿಸಬೇಕು. ಇಲ್ಲವಾದರೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳುವ ಎಚ್ಚರಿಕೆಯನ್ನು ಶಶಿಧರ ಕೋಸಂಬೆ ನೀಡಿದ್ದಾರೆ.