ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತದೆ ಎಂದು ಪೊಲೀಸ್ ಇಲಾಖೆ ಹಾಗೂ ಅಬಕಾರಿ ಅಧಿಕಾರಿಗಳಿಗೆ ದೂರುಗಳು ಬಂದ ಹಿನ್ನೆಲೆ ಈ ವೇಳೆ ಮುಳ್ಳೂರು ಗ್ರಾಮದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ದಾಳಿ ವೇಳೆ ಮಾರಾಟ ಮಾಡುತ್ತಿದ್ದ ಗವಿ ಶೆಟ್ಟಿಯನ್ನು ಬಂಧಿಸಿ ಆತನ ಬಳಿ ಇದ್ದ 3 ಲೀಟರ್ ಅಕ್ರಮ ಮದ್ಯ, ಹಾಗೂ ಬೈಕ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಮಾಹಿತಿ ನೀಡಿದ್ದಾರೆ