ಧರ್ಮಸ್ಥಳ ಪ್ರಕರಣ ಸಂಬಂಧ ಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದ್ದರು ಜೆಡಿಎಸ್ ಪಾದಯಾತ್ರೆ ಕೈಗೊಳ್ಳುತ್ತಿರುವುದಕ್ಕೆ ಅರಣ್ಯ ಜೈವಿಕ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ವಿರೋಧ ವ್ಯಕ್ತಪಡಿಸಿದರು. ಅವರು ತುಮಕೂರು ನಗರದ ಜೆಸಿ ರಸ್ತೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಅವರು ಮಾಧ್ಯಮದವರೊಂದಿಗೆ ಭಾನುವಾರ ಬೆಳಿಗ್ಗೆ 11.30 ರ ಸಮಯದಲ್ಲಿ ಮಾತನಾಡಿದರು.