ಮೀಸಲಾತಿಯಲ್ಲಿ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿ ಬೆಂಗಳೂರಲ್ಲಿ ಬುಧವಾರ ಅಲೆಮಾರಿಗಳು ಪ್ರತಿಭಟನೆ ನಡೆಸಲಿದ್ದಾರೆ.ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹಾವೇರಿಯಿಂದ ನಾಲ್ಕುನೂರಕ್ಕೂ ಅಧಿಕ ಅಲೆಮಾರಿಗಳು ಬೆಂಗಳೂರಿಗೆ ತೆರಳಲಿದ್ದಾರೆ. ಈ ಕುರಿತಂತೆ ಮಾತನಾಡಿದ ಅಲೆಮಾರಿ ಸಮುದಾಯದ ಜಿಲ್ಲಾಧ್ಯಕ್ಷ ವಿಭೂತಿ ಶೆಟ್ಟಿ ನಮ್ಮ ಹಕ್ಕಿಗಾಗಿ ಹೋರಾಟ ನಡೆಸುವದಾಗಿ ತಿಳಿಸಿದರು.