ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಕೊಳ್ಳೂರ ಎಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟೊಣ್ಣೂರ ಗ್ರಾಮದ ಜನರು ಗ್ರಾಮದಲ್ಲಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಗ್ರಾಮದಲ್ಲಿ ಎಲ್ಲೆಂದರಲ್ಲಿ ತುಂಬಿ ನಿಂತ ಕಲುಷಿತ ನೀರು, ಸ್ವಚ್ಛತೆ ಇಲ್ಲದೆ ಸೊಳ್ಳೆಗಳ ಕಾಟ ಸೊಳ್ಳೆಗಳಿಂದ ಡೆಂಗ್ಯೂ ಜ್ವರ ಬಂದು ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಗ್ರಾಮದ ಮುಖಂಡ ಭೀಮಣ್ಣ ಮರ್ಕಲ್ ಬೇಸರ ವ್ಯಕ್ತಪಡಿಸಿ, ತಮ್ಮ ಗ್ರಾಮದಲ್ಲಿನ ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.ಆದ್ದರಿಂದ ಬೇಸತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದು, ಅವರಾದರೂ ಸ್ವಚ್ಛತೆಗೆ ಕ್ರಮ ಕೈಗೊಳ್ಳುತ್ತಾರಾ ಎಂದು ಕಾದು ನೋಡಬೇಕಾಗಿದೆ ಎನ್ನುತ್ತಿದ್ದಾರೆ.