ಮಳವಳ್ಳಿ : ಶ್ರೀ ಕ್ಷೇತ್ರ ಧರ್ಮ ಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಶ್ರೀ ಹೆಗ್ಡೆ ಕುಟುಂಬದ ವಿರುದ್ಧ ಅಪ ಪ್ರಚಾರ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಪಟ್ಟಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಆಶ್ರಯದಲ್ಲಿ ಮಧ್ಯಾಹ್ನ 2.30ರ ಸಮಯದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಹೊರಟ ಪ್ರತಿಭಟನಾ ಕಾರರು ದಾರಿಯುದ್ದಕ್ಕೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಘೋಷಣೆಗಳನ್ನು ಕೂಗಿದರು.