ಕುಡಿದ ಮತ್ತಲ್ಲಿ ವಾಂತಿ ಮಾಡಲು ತೆರಳಿದ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಗಂಗಾವತಿ ತಾಲೂಕಿನ ಮಲ್ಲಾಪುರ ಕೆರೆಯಲ್ಲಿ ಶನಿವಾರ ಸಂಜೆ 5;30 ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾನೆ. ಗಂಗಾವತಿ ನಿವಾಸಿ ರಾಜ್ ಕಿರಣ ಎಂಬುವವರು ಶವವಾಗಿ ಪತ್ತೆಯಾಗಿದ್ದು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ...