ಕಲಬುರಗಿ : ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾರಾಯಣಗುರು ಶಕ್ತಿಪೀಠ ಕರದಾಳ ಪೀಠಾಧಿಪತಿಗಳಾದ ಡಾ. ಪ್ರಣವಾನಂದ ಮಹಾಸ್ವಾಮಿ ಹೇಳಿದ್ದಾರೆ.. ಸೆ6 ರಂದು ಮಧ್ಯಾನ 12 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಅಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಶೋಭಾ ಯಾತ್ರೆ, ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದೆಂದು ಹೇಳಿದರು.