ಅಂತರರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳಿಗೆ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕ್ರೀಡಾಕೂಟದಲ್ಲಿ ಕ್ರಿಕೆಟ್ ಆಡುವ ಮೂಲಕ ಚಾಲನೆ ನೀಡಿದರು.ಜಿಲ್ಲಾಧಿಕಾರಿ ಸಂಗಪ್ಪ, ಸಿಇಓ ಶಶಿಧರ ಕುರೇರ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಕ್ರೀಡಾಪಟುಗಳು ಭಾಗಿಯಾಗಿದ್ದರು.