ರಾಮನಗರ --ನಗರದ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಗುರುವಾರ ಸಂಜೆ 8 ಗಂಟೆ ಸಮಯದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಸಮಗ್ರ ಟೌನ್ ಶಿಪ್ (ಜಿಬಿಐಟಿ ) ಲಾಂಛನ ಬಿಡುಗಡೆ ಮಾಡಿದರು. ಗ್ರೇಟರ್ ಬೆಂಗಳೂರು ಟೌನ್ ಶಿಪ್ (ಜಿಬಿಐಟಿ) ಗುರುತಿಸಿರುವ ಜಮೀನು ಡಿನೋಟಿಫೈ ಮಾಡಿ ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಲು ಸಿದ್ದನಿಲ್ಲ, ಕಾನೂನು ಚೌಕಟ್ಟಿನಲ್ಲಿ ರೈತರಿಗೆ ನೆರವಾಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.