ನಶಾ ಮುಕ್ತ ಭಾರತ ಅಭಿಯಾನದಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಬಂಡೀಪುರದಿಂದ ಬೀದರ್‍ವರೆಗೆ ಹಮ್ಮಿಕೊಂಡಿರುವ ಬೈಕ್ ಜಾಥಾವು ಶನಿವಾರ ತುಮಕೂರು ಮಾರ್ಗದಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿತು. ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಪಿವಿಎಸ್ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು. ಈ ವೇಳೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ ಸಿಂಗ್ ಮಾತನಾಡಿದರು.