ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದ ವಿದ್ಯಾರ್ಥಿಗಳ ಗೋಳು ಕೇಳುವರು ಯಾರು ಎಂಬಂತಾಗಿದೆ. ಮಳೆಗಾಲ ಬಂದರೆ ಸಾಕು ವಿದ್ಯಾರ್ಥಿಗಳಿಗೆ ತೊಂದರೆ ಕಟ್ಟಿಟ್ಟ ಬುತ್ತಿಯಾಗಿದೆ. ಗ್ರಾಮದ ಮುಖ್ಯ ರಸ್ತೆಗೆ ಸೇತುವೆ ಇಲ್ಲದೆ ವಿದ್ಯಾರ್ಥಿಗಳು ನೀರಿನಲ್ಲಿ ನಡೆದುಕೊಂಡು ಬರುವಂತಹ ಪರಿಸ್ಥಿತಿ ಇಲ್ಲಿದೆ. ಇನ್ನು ಮುಖ್ಯರಸ್ತೆಗೆ ಸೇತುವೆ ನಿರ್ಮಾಣ ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮಾಧ್ಯಮ ಮೂಲಕ ಸರಕಾರಕ್ಕೆ ಮನವಿ ಮಾಡಿದರು. ಗ್ರಾಮದಿಂದ ಶಾಲೆಗೆ ದಿನಕ್ಕೆ ನೂರಾರು ವಿದ್ಯಾರ್ಥಿಗಳು ತೆರಳುತ್ತಾರೆ. ಕೆಲವೊಮ್ಮೆ ಭಾರ ಅನಾಹುತಗಳು ಸಹ ಇಲ್ಲಿ ಸಂಭವಿಸಿದ್ದವೇ ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಿ ಕೊಡಬೇಕು ಎಂದು ಆಗ್ರಹಿಸಿದರು.