ಬೆಟಗೇರಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 18 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶ್ರೀಕಾಂತ ಭಜಂತ್ರಿ ಎನ್ನುವ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈತ ಯಾರ ಭಯ ಇಲ್ಲದೆ ರಾಜಾರೋಷವಾಗಿ ಅಕ್ಕಿ ಸಂಗ್ರಹಿಸುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಅಲ್ಲದೆ ಪ್ರಶ್ನೆ ಮಾಡಿದವರನ್ನು ಬೆದರಿಸುವ ಕೆಲಸವನ್ನು ಮಾಡುತ್ತಿದ್ದ. ಈಗ ಪೊಲೀಸರ ಅತಿಥಿಯಾಗಿ ಜೈಲು ಕಂಬಿ ಎಣಿಸುತ್ತಿದ್ದಾನೆ.