ಜೋಯೀಡಾ: ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಇಂದು ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೋಯಿಡಾ ತಾಲೂಕು ಕೇಂದ್ರದಲ್ಲಿ ಬಿಜೆಪಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಮತ್ತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರರ ಮೂಲಕ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ಶಿವಾಜಿ ಗೋಸಾವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಕಾಮ್ರೇಕರ, ಬಿಜೆಪಿ ಮಹಾಶಕ್ತಿ ಕೆಂದ್ರ ಅಧ್ಯಕ್ಷ ಸಿದ್ದು ಜೊಕೇರಿ, ರಾಮನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಗಿರೀಶ್ ಗೊಸಾವಿ ಮೊದಲಾದವರು ಉಪಸ್ಥಿತರಿದ್ದರು.