ಕೊಳ್ಳೇಗಾಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರೊಂದಿಗೆ ಅಸಭ್ಯವಾಗಿ ವರ್ತಿಸಿ, ದರ್ಪದ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ರೈತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಸತ್ತೇಗಾಲ ಹೆದ್ದಾರಿ ಸರ್ಕಲ್‌ನಲ್ಲಿ ಜಮಾಯಿಸಿದ್ದ ರೈತ ಮುಖಂಡರು, ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ, ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ರೈತ ಸಂಘಟನೆಯ ಮುಖಂಡ ಭಾಸ್ಕರ್ ಮಾತನಾಡಿ, ರೈತರು ತಮ್ಮ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಸ್ಪಷ್ಟಪಡಿಸಲು ಬಂದಾಗ, ಸರ್ಕಾರದ ಹಿರಿಯ ನಾಯಕನಿಂದ ಶಿಸ್ತಿನ ವರ್ತನೆ ನಿರೀಕ್ಷಿಸಲಾಗುತ್ತದೆ. ಆದರೆ ಡಿ.ಕೆ. ಶಿವಕುಮಾರ್ ಅವರು ತೋರಿಸಿರುವ ಅಸಭ್ಯ ವರ್ತನೆ ರೈತರ ಆತ್ಮಗೌರವಕ್ಕೆ ಧಕ್ಕೆ ತಂದಿವೆ. ಇಂಥ ಧೋರಣೆಯನ್ನು ಖಂಡಿಸಬೇಕು, ಎಂದರು